
ಬೆಂಗಳೂರು, 10 ಮಾರ್ಚ್ (ಹಿ.ಸ.):
ಆ್ಯಂಕರ್:ವಿಧಾನಪರಿಷತ್ತಿನಲ್ಲಿ ಮಂಗಳವಾರ ಆನೆ–ಮಾನವ ಸಂಘರ್ಷ ಕುರಿತು ನಡೆದ ಚರ್ಚೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿ, ಕಾಡಿನಂಚಿನ ಪ್ರದೇಶಗಳಲ್ಲಿ ಸಂಭವಿಸಿರುವ ಮಾನವೀಯ ಜೀವಹಾನಿ ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಹೇಳಿದರು. ಮಾನವ ಜೀವ ಅಮೂಲ್ಯವಾಗಿದ್ದು, ಇಂತಹ ಘಟನೆಗಳು ಸರ್ಕಾರವನ್ನು ಕಳವಳಗೊಳಿಸುತ್ತವೆ ಎಂದರು.
ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಈಗಾಗಲೇ ₹5 ಲಕ್ಷ ಪರಿಹಾರ ನೀಡಲಾಗಿದೆ. ಉಳಿದ ₹15 ಲಕ್ಷ ಪರಿಹಾರವನ್ನು ವಾರದೊಳಗೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಆನೆ–ಮಾನವ ಸಂಘರ್ಷವನ್ನು ಶಾಶ್ವತವಾಗಿ ನಿಯಂತ್ರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. 2025–26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಹಾಗೂ ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ ರೈಲು ಹಳಿ ತಡೆಗೋಡೆ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.
ಇದರ ಜೊತೆಗೆ ಆನೆ ನಿಗ್ರಹ ಕಂದಕ ನಿರ್ಮಾಣ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಹಾಗೂ ಆನೆ ಕಾರ್ಯಪಡೆಗಳ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಾಡಿನಂಚಿನ ಗ್ರಾಮಗಳಲ್ಲಿ ಜನರ ಸುರಕ್ಷತೆಗಾಗಿ ಸರ್ಕಾರ ವಿವಿಧ ದೀರ್ಘಕಾಲಿಕ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa