90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ : ಸಚಿವೆ ಹೆಬ್ಬಾಳಕರ್
ಬೆಂಗಳೂರು, 11 ಮಾರ್ಚ್ (ಹಿ.ಸ.): ಆ್ಯಂಕರ್: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ
Hebalakar


ಬೆಂಗಳೂರು, 11 ಮಾರ್ಚ್ (ಹಿ.ಸ.):

ಆ್ಯಂಕರ್:

ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವರು ಮಾಹಿತಿ ಮಾಡಿದರು.

ಇನ್ನು ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಹಾಗು 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಹಾಗು 131 ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande