ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಧಾರವಾಡ, 11 ಮಾರ್ಚ್ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲೆಯ ರೈತ ಮಕ್ಕಳಿಗಾಗಿ 2026-27 ನೇ ಸಾಲಿಗೆ 10 ತಿಂಗಳ (ಅವಧಿಯ ದಿನಾಂಕ: 02.05.2026 ರಿಂದ 28.02.2027 ರವರೆಗೆ) ಗದಗ ತೋಟಗಾರಿಕೆ ತರಬೇತಿ ಕೇಂದ್ರದ ಮಹಿಳಾ-05 ಹಾಗೂ ಪುರುಷ–10, ಒಟ್ಟು–15 ಅಭ್ಯರ್ಥಿಗಳಿಗೆ ತರಬೇತಿಗಾಗಿ ಅರ್ಜಿಗಳನ್ನು ಆಹ್
ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ


ಧಾರವಾಡ, 11 ಮಾರ್ಚ್ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲೆಯ ರೈತ ಮಕ್ಕಳಿಗಾಗಿ 2026-27 ನೇ ಸಾಲಿಗೆ 10 ತಿಂಗಳ (ಅವಧಿಯ ದಿನಾಂಕ: 02.05.2026 ರಿಂದ 28.02.2027 ರವರೆಗೆ) ಗದಗ ತೋಟಗಾರಿಕೆ ತರಬೇತಿ ಕೇಂದ್ರದ ಮಹಿಳಾ-05 ಹಾಗೂ ಪುರುಷ–10, ಒಟ್ಟು–15 ಅಭ್ಯರ್ಥಿಗಳಿಗೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಧಾರವಾಡ ಜಿಲ್ಲೆಯ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಲ್ಲಾಪಂಚಾಯತ) ಧಾರವಾಡ ಕಛೇರಿಯಲ್ಲಿ ಅರ್ಜಿ ಶುಲ್ಕದ ಬಾಬತ್ತು ಸಾಮಾನ್ಯ ಅಭ್ಯರ್ಥಿಗಳಗೆ ರೂ. 30 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 15 ಮೌಲ್ಯದ ಇಂಡಿಯನ್ ಪೆÇೀಸ್ಟಲ್ ಆರ್ಡರ್ ಅಥವಾ Bank Demand Draft/K-2 Payment Challan ಮುಖಾಂತರ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಲ್ಲಾಪಂಚಾಯತ) ಧಾರವಾಡ ರವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಲಗತ್ತಿಸಬೇಕು.

ಅರ್ಜಿ ಫಾರಂಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ರವರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಮಾರ್ಚ 12, 2026 ರಿಂದ ಏಪ್ರೀಲ್ 13, 2026 ರವರೆಗೆ ಡೌನಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ ಏಪ್ರೀಲ್ 15, 2026 ರೊಳಗೆ ಸಲ್ಲಿಸಬೆಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2957801 ಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಧಾರವಾಡ ಕಛೇರಿಗೆ ಭೇಟಿ ನೀಡಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande