
ಹುಬ್ಬಳ್ಳಿ, 11 ಮಾರ್ಚ್ (ಹಿ.ಸ.):
ಆ್ಯಂಕರ್:ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನದ ಧ್ವನಿ ಕೇಳಿಬಂದಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾಗಿದ್ದ ಲಿಂಗರಾಜ ಪಾಟೀಲ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷದ ಹಿರಿಯ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ, ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.
“ಸದ್ಯಕ್ಕೆ ನಾನು ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಶೀಘ್ರದಲ್ಲೇ ತಿಳಿಸುತ್ತೇನೆ,” ಎಂದು ಲಿಂಗರಾಜ ಪಾಟೀಲ ಹೇಳಿದರು.
ಇದಕ್ಕೂ ಮುನ್ನ ಅವರು ಸಾಮಾಜಿಕ ಜಾಲತಾಣಗಳಲ್ಲೂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ. “ನಿಷ್ಠಾವಂತ ಮತ್ತು ಪ್ರಮಾಣಿಕ ಕಾರ್ಯಕರ್ತರಿಗೆ ಪಕ್ಷದಲ್ಲಿ ಬೆಲೆ ಇಲ್ಲವೇ?” ಎಂಬ ಅರ್ಥದ ಪೋಸ್ಟ್ ಮೂಲಕ ಅಸಮಾಧಾನ ಹೊರಹಾಕಿದ್ದು, ಅದು ವ್ಯಾಪಕವಾಗಿ ಚರ್ಚೆಗೆ ಕಾರಣ ಆಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa