ಇತಿಹಾಸ ಉಪನ್ಯಾಸಕ ರಾಜಕುಮಾರಗೆ ಪಿಎಚ್ ಡಿ ಪದವಿ
ಕೊಪ್ಪಳ , 11 ಮಾರ್ಚ್ (ಹಿ.ಸ.): ಆ್ಯಂಕರ್ : ಭಾಗ್ಯನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜಕುಮಾರ ಡಿ.ಎಸ್ ಅವರಿಗೆ ವಿಜಯನಗರ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಕಲಬುರಗಿಯ ಸಹ ಪ್ರಾಧ್ಯಾಪಕರಾದ ಮಲ್ಲಿಕಾರ್ಜುನ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಭಾಗ
Bhagyanagar: History lecturer Rajkumar gets Ph.D.


Bhagyanagar: History lecturer Rajkumar gets Ph.D.


ಕೊಪ್ಪಳ , 11 ಮಾರ್ಚ್ (ಹಿ.ಸ.):

ಆ್ಯಂಕರ್ : ಭಾಗ್ಯನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜಕುಮಾರ ಡಿ.ಎಸ್ ಅವರಿಗೆ ವಿಜಯನಗರ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.

ಕಲಬುರಗಿಯ ಸಹ ಪ್ರಾಧ್ಯಾಪಕರಾದ ಮಲ್ಲಿಕಾರ್ಜುನ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಭಾಗ್ಯನಗರದ ಸರ್ಕಾರಿ ಪ.ಪೂ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜಕುಮಾರ ಡಿ.ಎಸ್ ಅವರು, ಚರಿತ್ರೆ ವಿಭಾಗದಲ್ಲಿ ``ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗಗಳ ಚರಿತ್ರೆ ಮತ್ತು ಪರಿಣಾಮಗಳು'' ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಲಭಿಸಿದ್ದು, ಇತ್ತೀಚೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಹಾಗೂ ಹಂಪಿ ಕನ್ನಡ ವಿವಿ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ರಾಜಕುಮಾರಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿರುತ್ತಾರೆ ಎಂದು ಭಾಗ್ಯನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande