ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ ವಾಗ್ದಾಳಿ
ವಿಜಯಪುರ, 11 ಮಾರ್ಚ್ (ಹಿ.ಸ.) ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವಿಫಲವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಸುಳಿಯಲ್ಲಿ ತಳ್ಳಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಆರೋಪಿಸಿದರು. ವಿಜಯಪುರ ನಗರದ ಬಿಜೆಪಿ ಪಕ್ಷದ ಕಚೇರಿ
Bjp press meet


ವಿಜಯಪುರ, 11 ಮಾರ್ಚ್ (ಹಿ.ಸ.)

ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವಿಫಲವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಸುಳಿಯಲ್ಲಿ ತಳ್ಳಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಆರೋಪಿಸಿದರು.

ವಿಜಯಪುರ ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಯಂಘೋಷಿತ ಆರ್ಥಿಕ ತಜ್ಞರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗ ಕಾಂಗ್ರೆಸ್ ಪಕ್ಷದ ಶಾಸಕರೇ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಆಡಳಿತದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದ ಅವರು, ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಯುವನಿಧಿ ಯೋಜನೆ ಸರಿಯಾಗಿ ಜಾರಿಯಾಗದೆ ಸಾಯುವ ಹಂತಕ್ಕೆ ತಲುಪಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದ್ದು, ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಜನರ ಕಿವಿಗೆ ಹೂ ಇಡುವಂತಹ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ರಾಜ್ಯ ಬಜೆಟ್ನಲ್ಲಿ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಮೀಸಲಾದ ಅನುದಾನವನ್ನು ಬೇರೆ ಕಾರ್ಯಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಹೇಳಿದರು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ದೊರೆಯುವ ಹಣದ ಮೇಲೆ ಮಾತ್ರ ಆಡಳಿತ ನಡೆಸುತ್ತಿದೆ. ನರೇಗಾ ಯೋಜನೆಯ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಅಲ್ಲದೆ, ಅಲ್ಪಸಂಖ್ಯಾತರಿಗೆ ಅತಿಯಾಗಿ ಅನುದಾನ ನೀಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರವು ಎಲ್ಲ ವರ್ಗಗಳಿಗೂ ಸಮಾನವಾಗಿ ಅಭಿವೃದ್ಧಿ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಲವಾರು ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande