ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಸರಸ್ ಮೇಳಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಕೊಪ್ಪಳ , 11 ಮಾರ್ಚ್ (ಹಿ.ಸ.): ಆ್ಯಂಕರ್ : ಸರಸ್ ಮೇಳವು ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಸಾರ್ವಜನಿಕರಿಗೆ ಪರಿಚಯಿಸಿ, ಮಾರಾಟ ಮಾಡುವ ಮೂಲಕ ಸ್ವಾವಲಂಬನೆ ಬದಕು ರೂಪಿಸಿಕೊಳ್ಳಲು ಅವರಿಗೆ ಇದು ಉತ್ತಮ ಮಾರುಕಟ್ಟೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
District Magistrate inaugurates Saras Mela


District Magistrate inaugurates Saras Mela


District Magistrate inaugurates Saras Mela


District Magistrate inaugurates Saras Mela


ಕೊಪ್ಪಳ , 11 ಮಾರ್ಚ್ (ಹಿ.ಸ.):

ಆ್ಯಂಕರ್ : ಸರಸ್ ಮೇಳವು ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಸಾರ್ವಜನಿಕರಿಗೆ ಪರಿಚಯಿಸಿ, ಮಾರಾಟ ಮಾಡುವ ಮೂಲಕ ಸ್ವಾವಲಂಬನೆ ಬದಕು ರೂಪಿಸಿಕೊಳ್ಳಲು ಅವರಿಗೆ ಇದು ಉತ್ತಮ ಮಾರುಕಟ್ಟೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.

ಅವರು ಬುಧವಾರ ಕೊಪ್ಪಳ ನಗರದ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯ ಮಿಷನ್ ಕೊಪ್ಪಳ ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಂ ಮತ್ತು ನಲ್ಮ್ ಯೋಜನೆಯಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 11 ರಿಂದ 13ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ 2026ರ ಸರಸ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸರಸ್ ಮೇಳ ಆಯೋಜಿಸಲಾಗಿದ್ದು, ಒಳ್ಳೆಯ ವಿಚಾರವಾಗಿದೆ. ಈ ಕಾರ್ಯಕ್ರಮದ ಮೂಲಕ ಜನರಿಗೆ ಮತ್ತು ವಿಶೇಷವಗಿ ಇಂದಿನ ಯುವ ಸಮುದಾಯಕ್ಕೆ ನಮ್ಮ ಭಾಗದ ಕಲೆ, ಸಂಸ್ಕøತಿಯನ್ನು ಪರಿಚಯಿಸುವುದರ ಜೊತೆಗೆ ಗ್ರಾಮೀಣ ಕಲೆ, ಪಾರಂಪರಿಕ ಆಹಾರ ಪದ್ಧತಿಗಳು, ಸಾವಯವ ಆಹಾರ ಪದ್ಧತಿ ಮತ್ತು ಉಡುಗೆ ತೊಡುಗೆಗಳ ಬಗ್ಗೆ ತಿಳಿಸಿಕೊಡಲಾಗುತ್ತಿದೆ.

ಈ ಮೇಳದಲ್ಲಿನ ಬಹುತೇಕ ಎಲ್ಲಾ ಉತ್ಪನ್ನಗಳು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸೇರಿದ್ದರಿಂದ ಮಹಿಳಾ ಉದ್ಯಮಿಗಳಿಗೆ ಉತ್ತಮ ಆದಾಯ ಒದಗಿಸಲು ಈ ಮೇಳವು ಪೂರಕವಾಗಲಿದೆ. ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದರ ಜೊತೆಗೆ ಮಹಿಳಾ ಉದ್ಯಮಶೀಲತೆಗೆ ಉತ್ತೇಜನ ನೀಡುವಲ್ಲಿ ಇಂತಹ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ಕೌಶಲ್ಯ ಮಿಷನ್ ವ್ಯವಸ್ಥಾಪಕರು, ಎನ್.ಆರ್.ಎಲ್.ಎಂ ಮತ್ತು ನಲ್ಮ್ ಯೋಜನೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಸ್ವ-ಸಹಾಯ ಗುಂಪಿನ ಸದಸ್ಯರ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ: ನಗರ ಮತ್ತು ಗ್ರಾಮೀಣ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರು ತಯಾರಿಸುತ್ತಿರುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಒಟ್ಟು 30 ಸ್ಟಾಲ್ಗಳ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯಿತಿಗಳಿಂದ ಬಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಾವು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು.

ಮೇಳದಲ್ಲಿ ಕಿನ್ನಾಳ ಗೊಂಬೆಗಳು, ಗಾಣದಿಂದ ತಯಾರಿಸಿದ ಕೊಬ್ಬರಿ ಎಣ್ಣೆ, ಕೈಮಗ್ಗದಿಂದ ತಯಾರಿಸಿದ ಕಾಟನ್ ಸೀರೆಗಳು, ಹ್ಯಾಂಡ್ ಮೇಡ್ ಬ್ಯಾಗ್ಗಳು, ಕೌದಿ, ಲಮಾಣಿ ಕೈಗಾರಿಕಾ ಉತ್ಪನ್ನಗಳು, ಬಾಳೆ ನಾರು ಉತ್ಪನ್ನಗಳು, ಬಿದಿರಿನ ಬುಟ್ಟಿಗಳು, ರಾಗಿ ಪೌಡರ್, ಸಿರಿಧಾನ್ಯ ಪೌಡರ್, ಅಗರಬತ್ತಿಗಳು, ಮಸಾಲೆ ಹಾಗೂ ವಿವಿಧ ರೀತಿಯ ಉಪ್ಪಿನಕಾಯಿ, ಸಜ್ಜೆ, ಜೋಳ ಮತ್ತು ರಾಗಿಯ ಮಂಡಾಳು, ಚಾಕೊಲೇಟ್, ಸಾವಯವ ಉತ್ಪನ್ನಗಳು, ಹಪ್ಪಳ, ಚಕ್ಕುಲಿ, ನಿಪ್ಪಟ್ಟು, ಕಜ್ಜಾಯ ಸೇರಿದಂತೆ ವಿವಿಧ ಆಹಾರ ಪದಾರ್ಥಗಳು ಹಾಗೂ ಕರಕುಶಲ ವಸ್ತುಗಳನ್ನು ಮಾರಾಟಕ್ಕೆ ಇಡಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಈ ಮೇಳಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande