ರಾಜ್ಯದಲ್ಲಿ ಒಣ ಹವಾಮಾನ ಮುಂದುವರಿಕೆ
ಬೆಂಗಳೂರು, 11 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಇಂದೂ ಬಿಸಿಲಿನ ತಾಪಮಾನ ಹೆಚ್ಚಿರುವ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಸಾಮಾನ್ಯವಾಗಿ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ವಿಶೇಷವಾಗಿ
Whether


ಬೆಂಗಳೂರು, 11 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಇಂದೂ ಬಿಸಿಲಿನ ತಾಪಮಾನ ಹೆಚ್ಚಿರುವ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಐಎಂಡಿ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಸಾಮಾನ್ಯವಾಗಿ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಒಳನಾಡು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಧ್ಯಾಹ್ನ ವೇಳೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ವೇಳೆ ತುಸು ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande