
ವಿಜಯಪುರ, 11 ಮಾರ್ಚ್ (ಹಿ.ಸ.)
ಆ್ಯಂಕರ್ : ಗ್ಯಾಸ್ ಸಿಲಿಂಡರ್ ಬೆಲೆ ಏರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ವಿಜಯಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದವರು ಪ್ರತಿಭಟನೆ ನಡೆಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ರ್ಯಾಲಿ ನಡೆಸಿದ ಕಾರ್ಯಕರ್ತರು, ರಸ್ತೆಯಲ್ಲಿಯೇ ಸಿಲೆಂಡರ್, ಸ್ಟೋವುಗಳನ್ನು ಇಟ್ಟು ಅಡುಗೆ ಮಾಡುವ ಅಣುಕು ಪ್ರದರ್ಶನ ಮಾಡುವ ಮೂಲಕ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಮಹಿಳಾ ಕಾಂಗ್ರೆಸ್ ಮುಖಂಡರು, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಗೃಹಿಣಿಯರ ಮೇಲೆಯೇ ಇದರ ಭಾರ ಹೆಚ್ಚಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande