
ವಿಜಯಪುರ, 11 ಮಾರ್ಚ್ (ಹಿ.ಸ.):
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ
ಚಿಕ್ಕ ಗರಸಂಗಿ ಗ್ರಾಮದ ಸರ್ಕಾರಿ ಶಾಲೆ ಎದುರು ಗ್ರಾಮದ ಮುಖಂಡರು, ಪೋಷಕರು ಹಾಗೂ ಮಕ್ಕಳನ್ನು ಒಗ್ಗೂಡಿಸಿ ಎಐಡಿಎಸ್ಓ ರಾಜ್ಯ ಸರ್ಕಾರದ KPS ಮ್ಯಾಗ್ನೇಟ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಎಐಡಿಎಸ್ಓ ಸದಸ್ಯರು, ಈ ಯೋಜನೆ ಜಾರಿಯಾದರೆ ಸ್ಥಳೀಯ ಮಕ್ಕಳ ಶಿಕ್ಷಣ ವ್ಯವಸ್ಥೆಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಈಗಾಗಲೇ ಗ್ರಾಮದಲ್ಲಿ ನಡೆಯುತ್ತಿರುವ ಶಾಲೆಗಳ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಹಿತ ದಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಗ್ರಾಮದ ನಾಯಕರು ಹಾಗೂ ಪೋಷಕರು, ಚಿಕ್ಕ ಗರಸಂಗಿ ಗ್ರಾಮದಲ್ಲಿ KPS ಮ್ಯಾಗ್ನೇಟ್ ಯೋಜನೆಯನ್ನು ಜಾರಿಗೆ ತರುವುದನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರವು ಜನಾಭಿಪ್ರಾಯವನ್ನು ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಗ್ರಾಮಸ್ಥರು ಮುಂದುವರೆದು, ಸ್ಥಳೀಯ ಜನರ ಅಭಿಪ್ರಾಯವನ್ನು ಕೇಳದೆ ಯಾವುದೇ ಯೋಜನೆಯನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿದರು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande