
ವಿಜಯಪುರ, 11 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಪಂಚರತ್ನ ಹೋಟೆಲ್ನಲ್ಲಿ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದ ಅನುಮಾನ ವ್ಯಕ್ತವಾಗಿದ್ದು, ಬೆಂಕಿ ವೇಗವಾಗಿ ವ್ಯಾಪಿಸಿದ ಪರಿಣಾಮ ಹೋಟೆಲ್ನಲ್ಲಿದ್ದ ಹಲವಾರು ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಗೊಂಡಿವೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸಿದರು. ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಿದ ಪರಿಣಾಮ ಇನ್ನಷ್ಟು ಹಾನಿ ಸಂಭವಿಸುವುದನ್ನು ತಪ್ಪಿಸಲಾಗಿದೆ.
ಘಟನೆಯ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ಮೂಲಗಳು ತಿಳಿಸಿವೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande