ಶೀತಲ ಘಟಕದ ನಿರ್ಮಾಣ ಕಾಮಗಾರಿ ಪರಿಶೀಲನೆ
ವಿಜಯಪುರ, 11 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ದ್ರಾಕ್ಷಿ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ಶೀತಲ ಘಟಕ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಘ
Cold storage


ವಿಜಯಪುರ, 11 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲಾ ದ್ರಾಕ್ಷಿ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ಶೀತಲ ಘಟಕ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪೀರ್ಗೊಂಡ ಗದ್ಯಾಳ ಅವರು ಕಾಮಗಾರಿಯ ಕುರಿತು ಮಾಹಿತಿ ಪಡೆದು, ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.

ನೂತನ ಶೀತಲ ಘಟಕ ನಿರ್ಮಾಣದಿಂದ ಜಿಲ್ಲೆಯ ದ್ರಾಕ್ಷಿ ಬೆಳೆಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಸುರೇಶಗೌಡ ಬಿರಾದಾರ, ಸಂಘದ ಇತರ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande