
ಬಾಗಲಕೋಟೆ, 12 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ
ನಗರದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಗಾಗಿ ಹಣ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿರುವ ಕಾಂಗ್ರೆಸ್ ಯುವ ಮುಖಂಡ ಹೊಳಬಸು ಶೆಟ್ಟರ ಅವರನ್ನು ಮರಾಠ ಹಿತ ಚಿಂತಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಗರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹೊಳಬಸು ಶೆಟ್ಟರರಿಗೆ ಗೌರವಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೊಳಬಸು, ಶಿವಾಜಿ ಮಹಾರಾಜರು ದೇಶಭಕ್ತಿ, ಧೈರ್ಯ ಮತ್ತು ಸ್ವಾಭಿಮಾನಕ್ಕೆ ಪ್ರತೀಕವಾಗಿದ್ದು, ಅವರ ಮೂರ್ತಿ ಪ್ರತಿಷ್ಠಾಪನೆ ಯುವ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸಂಘದ ಎಂ.ಆರ್. ಶಿಂಧೆ, ಮೋಹನ ಜಾಧವ, ಗುಂಡೂರಾವ್ ಶಿಂಧೆ, ಮಾರುತಿ ನಲವಡೆ, ನಗರಸಭೆಯ ಮಾಜಿ ಸದಸ್ಯ ಅಂಬಾಜಿ ಜೋಶಿ, ಸಂಜೀವ ವಾಡಕರ್, ತಾನಾಜಿ ಜಮಖಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande