
ವಿಜಯಪುರ, 12 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದ ಗೋಲ್ ಗುಮ್ಮಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ವಸತಿ ನಿಲಯಕ್ಕೆ ಅಕ್ಕ ಪಡೆ ಸಿಬ್ಬಂದಿಯವರು ಭೇಟಿ ನೀಡಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡರು.
ಈ ಸಂದರ್ಭದಲ್ಲಿ ಅಕ್ಕ ಪಡೆ ಸಿಬ್ಬಂದಿಯವರು ತಮ್ಮ ಕಾರ್ಯವೈಖರಿ ಹಾಗೂ ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ವಿದ್ಯಾರ್ಥಿನಿಯರಿಗೆ ವಿವರವಾದ ಮಾಹಿತಿ ನೀಡಿದರು.
ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುವ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಿದರು. ಇದಲ್ಲದೆ ವಿದ್ಯಾರ್ಥಿನಿಯರಿಗೆ ಪೋಕ್ಸೋ ಕಾಯ್ದೆ, ಭಿಕ್ಷಾಟನೆ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಸಾಗಾಣಿಕೆ, ಮಕ್ಕಳ ಕಳ್ಳತನ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಯಾವುದೇ ಸಮಸ್ಯೆ ಎದುರಾದಲ್ಲಿ ಧೈರ್ಯವಾಗಿ ಪೊಲೀಸರನ್ನು ಸಂಪರ್ಕಿಸುವಂತೆ ಹಾಗೂ ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಸತಿ ನಿಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande