ವಚನ ಕಲ್ಯಾಣ ಅಹೋರಾತ್ರಿ ಪ್ರಯೋಗ: ಕಲಾವಿದರ ಆಯ್ಕೆ
ಕೊಪ್ಪಳ, 12 ಮಾರ್ಚ್ (ಹಿ.ಸ.) ಆ್ಯಂಕರ್: `ವಚನ ಕಲ್ಯಾಣ'' ಎಂಬ 9 ಗಂಟೆಗಳ ಅಹೋರಾತ್ರಿ ನಾಟಕವನ್ನು ಸಿದ್ದಪಡಿಸಿ ನಾಡಿನಾದ್ಯಂತ ಪ್ರದರ್ಶನ ಮಾಡಲು ಕಲಾವಿದರ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ವಚನ ಕಲ್ಯಾಣ'''' ಎಂಬ ಅಹೋರಾ
ವಚನ ಕಲ್ಯಾಣ ಅಹೋರಾತ್ರಿ ಪ್ರಯೋಗ: ಕಲಾವಿದರ ಆಯ್ಕೆ


ಕೊಪ್ಪಳ, 12 ಮಾರ್ಚ್ (ಹಿ.ಸ.)

ಆ್ಯಂಕರ್: `ವಚನ ಕಲ್ಯಾಣ' ಎಂಬ 9 ಗಂಟೆಗಳ ಅಹೋರಾತ್ರಿ ನಾಟಕವನ್ನು ಸಿದ್ದಪಡಿಸಿ ನಾಡಿನಾದ್ಯಂತ ಪ್ರದರ್ಶನ ಮಾಡಲು ಕಲಾವಿದರ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ವಚನ ಕಲ್ಯಾಣ'' ಎಂಬ ಅಹೋರಾತ್ರಿ ನಾಟಕವನ್ನು ಸಿದ್ದಪಡಿಸಿ ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ನುರಿತ ಹಾಗೂ ಆಸಕ್ತ ಯುವಕ-ಯುವತಿಯರು ಮತ್ತು ಅನುಭವಿ ರಂಗ ಕಲಾವಿದರು ಅಥವಾ ಗಾಯಕರು ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 40 ವರ್ಷಗಳ ರಂಗ ಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಆಧ್ಯತೆಯನ್ನು ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು 3 ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕವಾಗಿ ತರಬೇತಿ ಮತ್ತು ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯ. ಮಾಸಿಕ ಗೌರವ ಧನ ಮತ್ತು ಊಟ ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಅರ್ಜಿ ನಮೂನೆಯನ್ನು ಇಲಾಖೆಯ ವೆಬೈಟ್ Kannadasiri.Karnataka.gov.in ನಲ್ಲಿ ಪಡೆಯಬಹುದು.

ಭರ್ತಿಮಾಡಿದ ಅರ್ಜಿಗಳನ್ನು ಮಾರ್ಚ್ 20 ರೊಳಗೆ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಕಲಾಗ್ರಾಮ ಮಲ್ಲತಹಳ್ಳಿ ಬೆಂಗಳೂರು-560056, ಇಲ್ಲಿಗೆ ಅಂಚೆ ಮೂಲಕ ಅಥವಾ ಮುದ್ದಾಮ ತಲುಪುವಂತೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9448538620 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande