ಬಾಗಲಕೋಟೆ ಬಿಟಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ
ಬಾಗಲಕೋಟೆ, 12 ಮಾರ್ಚ್ (ಹಿ.ಸ.) ಆ್ಯಂಕರ್ : ಸೈಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಮಹಾನಿಂಗ ನಂದಗಾವಿ ಅವರ ಮಾರ್ಗದರ್ಶನದಲ್ಲಿ ಡಿವೈ
ಬಾಗಲಕೋಟೆ ಬಿಟಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ


ಬಾಗಲಕೋಟೆ, 12 ಮಾರ್ಚ್ (ಹಿ.ಸ.)

ಆ್ಯಂಕರ್ : ಸೈಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಮಹಾನಿಂಗ ನಂದಗಾವಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ತಂಡವು ನಗರದ ವಿದ್ಯಾಗಿರಿಯಲ್ಲಿರುವ ಬಿಟಿಡಿಎ ಕಚೇರಿಗೆ ಭೇಟಿ ನೀಡಿ ಪ್ರಮುಖ ಕಡತಗಳನ್ನು ಪರಿಶೀಲಿಸಿದರು.

ಸೈಟ್ ಹಂಚಿಕೆಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ದಾಳಿಯ ವೇಳೆ ಅಧಿಕಾರಿಗಳು ಹಲವು ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿ ಸಂಗ್ರಹಿಸಿರುವುದಾಗಿ ಮೂಲಗಳು ತಿಳಿಸಿವೆ.

ಈ ದಿಢೀರ್ ದಾಳಿಯಿಂದ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಆತಂಕ ಉಂಟಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕುರಿತು ಭಾರೀ ಚರ್ಚೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ತನಿಖೆಯ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande