
ಬಾಗಲಕೋಟೆ, 12 ಮಾರ್ಚ್ (ಹಿ.ಸ.)
ಆ್ಯಂಕರ್ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 14ರಂದು ಬಾಗಲಕೋಟೆ ನಗರಕ್ಕೆ ಆಗಮಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್ ಜಿ ನಂಜಯ್ಯನಮಠ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಗೆ ಸರ್ಕಾರದಿಂದ ವೈದ್ಯಕೀಯ ಕಾಲೇಜು ಮಂಜೂರಾಗಿರುವುದು ಜಿಲ್ಲೆಯ ಜನತೆಗೆ ಮಹತ್ವದ ಸಾಧನೆಯಾಗಿದ್ದು, ಅದರ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಸಿಎಂ ನೆರವೆರಿಸಲಿದ್ದಾರೆಂದು ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಜಿಲ್ಲೆಯ ಜನರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಮಾತನಾಡಿದ ನಂಜಯ್ಯನಮಠ, ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಪ್ರದೇಶದಲ್ಲಿ ಜಮೀನು ಕಳೆದುಕೊಂಡ ಕೆಲವು ರೈತರಿಗೆ ಮುಖ್ಯಮಂತ್ರಿಗಳು ಪರಿಹಾರಧನದ ಚೆಕ್ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸಿಎಂ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳು ಕೂಡ ನಡೆಯಲಿವೆ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande