ಉದ್ಯೋಗಸ್ಥ ಮಹಿಳೆಯರಿಗೆ ಆಸರೆಯಾದ ವಿಜಯಪುರದ ಶಿಶುಪಾಲನಾ ಕೇಂದ್ರ-ಪೋಷಕರಿಂದ ಪ್ರಶಂಸೆ
ವಿಜಯಪುರ, 12 ಮಾರ್ಚ್ (ಹಿ.ಸ.) ಆ್ಯಂಕರ್ : ಉದ್ಯೋಗದಲ್ಲಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಸಮಸ್ಯೆಗೆ ಪರಿಹಾರವಾಗಿ ವಿಜಯಪುರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಆರಂಭಿಸಿರುವ ಶಿಶುಪಾಲನಾ ಕೇಂದ್ರವು ಉತ್ತಮ ಸ್ಪಂದನೆ ಪಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ
Children development


ವಿಜಯಪುರ, 12 ಮಾರ್ಚ್ (ಹಿ.ಸ.)

ಆ್ಯಂಕರ್ : ಉದ್ಯೋಗದಲ್ಲಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಸಮಸ್ಯೆಗೆ ಪರಿಹಾರವಾಗಿ ವಿಜಯಪುರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಆರಂಭಿಸಿರುವ ಶಿಶುಪಾಲನಾ ಕೇಂದ್ರವು ಉತ್ತಮ ಸ್ಪಂದನೆ ಪಡೆಯುತ್ತಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ಮಹಿಳಾ ನೌಕರರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ನಿಶ್ಚಿಂತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ.

ಕೇಂದ್ರದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ, ಆಟಿಕೆಗಳು, ಕಲಿಕಾ ಸಾಮಗ್ರಿಗಳು, ವಿಶ್ರಾಂತಿ ಕೋಣೆ, ಆಟದ ಮೈದಾನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹಾಲು, ಮೊಟ್ಟೆ, ರಾಗಿ ಗಂಜಿ, ಹಣ್ಣು ಸೇರಿದಂತೆ ಪೌಷ್ಟಿಕ ಆಹಾರವನ್ನು ದಿನನಿತ್ಯ ನೀಡಲಾಗುತ್ತಿದೆ.

ಸುಮಾರು ₹30 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಈ ಕೇಂದ್ರವನ್ನು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಹಯೋಗದಲ್ಲಿ ನಿರ್ಮಿಸಲಾಗಿದೆ. ಇಲ್ಲಿ ಶಿಕ್ಷಕಿ ಹಾಗೂ ಸಹಾಯಕಿಯರು ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದು, ಪ್ರತಿದಿನ 10 ರಿಂದ 15 ಮಕ್ಕಳು ಕೇಂದ್ರಕ್ಕೆ ಬರುತ್ತಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಮಾತನಾಡಿ, ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಮಕ್ಕಳ ಆರೈಕೆ ಮಾಡಲಾಗುತ್ತಿದ್ದು, ಮಹಿಳಾ ಸರ್ಕಾರಿ ನೌಕರರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande