
ನವದೆಹಲಿ, 12 ಮಾರ್ಚ್ (ಹಿ.ಸ.):
ಆ್ಯಂಕರ್:
ನಗರ ಮೂಲಸೌಕರ್ಯ ಬಲಪಡಿಸಲು ನಿಟ್ಟಿನಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ತೋಖಾನ್ ಸಾಹು ಅವರೊಂದಿಗೆ ಸಭೆ ನಡೆಸಿದ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಕ್ಸನಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ, ನಗರ ಚಲನಶೀಲತೆ (ಮೊಬೈಲಿಟಿ) ಹಾಗೂ ನಗರ ಪ್ರದೇಶಗಳಲ್ಲಿ ಸೇವಾ ವಿತರಣೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರು. ಈ ಕಾರ್ಯಗಳಲ್ಲಿ ವಿವಿಧ ಸಚಿವಾಲಯಗಳ ನಡುವಿನ ಸಂಘಟಿತ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ದೇಶಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಹಾಗೂ ನಗರ ಪ್ರದೇಶಗಳಲ್ಲಿ ಜನರ ಜೀವನಮಟ್ಟವನ್ನು ಸುಧಾರಿಸಲು ಅಂತರ–ಸಚಿವಾಲಯಗಳ ಸಮನ್ವಯ ಅತ್ಯಗತ್ಯವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa