ಮಾ.16 ರಂದು ಮಹನೀಯರ ಜಯಂತಿ ಪೂರ್ವಭಾವಿ ಸಭೆ
ಬಳ್ಳಾರಿ, 12 ಮಾರ್ಚ್ (ಹಿ.ಸ.) ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ
ಮಾ.16 ರಂದು ಮಹನೀಯರ ಜಯಂತಿ ಪೂರ್ವಭಾವಿ ಸಭೆ


ಬಳ್ಳಾರಿ, 12 ಮಾರ್ಚ್ (ಹಿ.ಸ.)

ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಚರ್ಚಿಸಲು ಮಾ.16 ರಂದು ಸಂಜೆ 04 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande