ಎಲ್ಪಿಜಿ ಕೊರತೆ ವಿರೋಧಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
ನವದೆಹಲಿ, 12 ಮಾರ್ಚ್ (ಹಿ.ಸ.): ಆ್ಯಂಕರ್: ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದ ಲಕ್ಷಾಂತರ ಮನೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಪ್ರತಿ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದವು. ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿ ಪಕ್ಷದ
Protest


ನವದೆಹಲಿ, 12 ಮಾರ್ಚ್ (ಹಿ.ಸ.):

ಆ್ಯಂಕರ್:

ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದ ಲಕ್ಷಾಂತರ ಮನೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಪ್ರತಿ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದವು.

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಇತರ ಪ್ರತಿ ಪಕ್ಷಗಳ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಪ್ರತಿಭಟನೆ ವೇಳೆ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎಲ್‌ಪಿಜಿ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸಾಮಾನ್ಯ ಜನರು, ವಿಶೇಷವಾಗಿ ಮಧ್ಯಮ ಮತ್ತು ಬಡ ಕುಟುಂಬಗಳು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಅವರು ಆರೋಪಿಸಿದರು.

ಬಿಕ್ಕಟ್ಟನ್ನು ಮುಂಚಿತವಾಗಿ ಅಂದಾಜಿಸಲು ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ನಿರ್ಲಕ್ಷ್ಯ ಮತ್ತು ದುರುಪಯೋಗದ ಪರಿಣಾಮವೇ ದೇಶದಾದ್ಯಂತ ಜನರು ಇಂದಿನ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಅವರು ದೂರಿದರು.

ಕೇಂದ್ರ ಸರ್ಕಾರ ತಕ್ಷಣವೇ ಎಲ್‌ಪಿಜಿ ಪೂರೈಕೆಯನ್ನು ಸರಿಪಡಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಪ್ರತಿ ಪಕ್ಷಗಳು ಆಗ್ರಹಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande