
ವಿಜಯಪುರ, 12 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ
ಇಂಡಿ ನಗರದ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರಾಗಿ ರಾಜ್ಯ ಸರ್ಕಾರದಿಂದ ನೇಮಕಗೊಂಡಿರುವ ಎಲ್ಲರಿಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅಭಿನಂದನೆಗಳನ್ನು ಸಲ್ಲಿಸಿದರು.
ನೂತನವಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಅಧಿಕಾರಾವಧಿಯಲ್ಲಿ ಇಂಡಿ ನಗರಕ್ಕೆ ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯನ್ನು ತರಲಿದ್ದಾರೆ ಎಂಬ ವಿಶ್ವಾಸವನ್ನು ಶಾಸಕರು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇಂಡಿ ನಗರವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಯೋಜನಾ ಪ್ರಾಧಿಕಾರದ ಪಾತ್ರ ಮಹತ್ವದ್ದಾಗಿದೆ. ನಗರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಸುಸೂತ್ರ ನಗರ ಯೋಜನೆ ಹಾಗೂ ಸಾರ್ವಜನಿಕರಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧ್ಯಕ್ಷರು ಹಾಗೂ ಸದಸ್ಯರು ಪರಿಣಾಮಕಾರಿ ಕಾರ್ಯನಿರ್ವಹಣೆ ಮಾಡುವಂತೆ ಆಶಿಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ಗೌರವಿಸಿ ಅಭಿನಂದಿಸಲಾಯಿತು. ಅವರ ಅಧಿಕಾರಾವಧಿಯಲ್ಲಿ ಇಂಡಿ ನಗರವು ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ಎಲ್ಲರೂ ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande