
ಬಳ್ಳಾರಿ, 12 ಮಾರ್ಚ್ (ಹಿ.ಸ.)
ಆ್ಯಂಕರ್: ಬಳ್ಳಾರಿ ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಆಲಿಸಲು ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಮಾ.18 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ವಲಯ ಕಚೇರಿಯ ಮೊದಲನೇ ಮಹಡಿಯ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ.
ಬಳ್ಳಾರಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರು (ವಿ) ಅಧ್ಯಕ್ಷತೆ ವಹಿಸುವರು.
ಸಭೆಗೆ ಬಳ್ಳಾರಿ ಗ್ರಾಮೀಣ ಜೆಸ್ಕಾಂ ವಿಭಾಗಕ್ಕೆ ಒಳಪಡುವ ಗ್ರಾಮೀಣ ಉಪ-ವಿಭಾಗದ ಬಳ್ಳಾರಿ, ಕಂಪ್ಲಿ, ಸಿರುಗುಪ್ಪ, ಕುರುಗೋಡು ಮತ್ತು ಸಂಡೂರು ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ನ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್