ಮಾ.16 ರಂದು ಎಸ್ಸಿಎಸ್ಪಿ-ಟಿಎಸ್ಪಿ ಜಿಲ್ಲಾ ಸಭೆ
ಬಳ್ಳಾರಿ, 12 ಮಾರ್ಚ್ (ಹಿ.ಸ.) ಆ್ಯಂಕರ್: ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾ
ಮಾ.16 ರಂದು ಎಸ್ಸಿಎಸ್ಪಿ-ಟಿಎಸ್ಪಿ ಜಿಲ್ಲಾ ಸಭೆ


ಬಳ್ಳಾರಿ, 12 ಮಾರ್ಚ್ (ಹಿ.ಸ.)

ಆ್ಯಂಕರ್: ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಮಾ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ.

ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande