ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಆರ್. ಎನ್. ರವಿ ಪ್ರಮಾಣ ವಚನ ಸ್ವೀಕಾರ
ಕೋಲ್ಕತ್ತಾ, 12 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಬಂಗಾಳ ರಾಜ್ಯದ ನೂತನ ರಾಜ್ಯಪಾಲರಾಗಿ ಆರ್. ಎನ್. ರವಿ ಅವರು ಗುರುವಾರ ಕೋಲ್ಕತ್ತಾದ ಲೋಕಭವನದಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರು ಪ್ರಮಾಣ ವಚನ ಬೋಧಿಸಿದರು. ಪ್ರಮಾಣ
Oath


ಕೋಲ್ಕತ್ತಾ, 12 ಮಾರ್ಚ್ (ಹಿ.ಸ.):

ಆ್ಯಂಕರ್:

ಪಶ್ಚಿಮ ಬಂಗಾಳ ರಾಜ್ಯದ ನೂತನ ರಾಜ್ಯಪಾಲರಾಗಿ ಆರ್. ಎನ್. ರವಿ ಅವರು ಗುರುವಾರ ಕೋಲ್ಕತ್ತಾದ ಲೋಕಭವನದಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರು ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ , ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ, ವಿಧಾನಸಭಾಧ್ಯಕ್ಷ ಬಿಮನ್ ಬ್ಯಾನರ್ಜಿ ಹಾಗೂ ಎಡಪಂಥೀಯ ನಾಯಕ ಬಿಮನ್ ಬೋಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದ ಮೊದಲು ಹಾಗೂ ನಂತರ ರಾಷ್ಟ್ರಗೀತೆ ಮತ್ತು “ವಂದೇ ಮಾತರಂ” ಗಾಯನ ನಡೆಯಿತು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜ್ಯಪಾಲರು ಮುಖ್ಯಮಂತ್ರಿ ಮತ್ತು ಇತರ ಅತಿಥಿಗಳೊಂದಿಗೆ ಶಿಷ್ಟಾಚಾರ ಭೇಟಿಯನ್ನು ನಡೆಸಿದರು.

ಹಿಂದಿನ ರಾಜ್ಯಪಾಲ ಸಿ. ವಿ. ಆನಂದ ಬೋಸ್ ಅವರ ರಾಜೀನಾಮೆಯ ನಂತರ ಆರ್.ಎನ್.ರವಿ ಅವರನ್ನು ಪಶ್ಚಿಮ ಬಂಗಾಳ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande