
ಬಾಗಲಕೋಟೆ, 13 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ಜಮಖಂಡಿ ತಾಲ್ಲೂಕಿನ ಚಿಕ್ಕಲಕಿ ಕ್ರಾಸ್ ಬಳಿ ಇರುವ ಎರಕಲಮಟ್ಟಿ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ರೈತ ಶ್ರೀಕಾಂತ ಬಡಿಗೇರ ಮರ ಏರಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಯೋಜನೆ ವರ್ಷಗಳಿಂದ ಪೂರ್ಣಗೊಳ್ಳದೇ ಇರುವುದರಿಂದ ರೈತರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಆರೋಪಿಸಿದ ಅವರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನ ಹರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಗ್ರಾಮಸ್ಥರು ರೈತನನ್ನು ಮನವೊಲಿಸಿ ಆತ್ಮಹತ್ಯೆ ಯತ್ನದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದರು. ಬಳಿಕ ರೈತ ಶ್ರೀಕಾಂತ ಬಡಿಗೇರ ಮರದಿಂದ ಕೆಳಗೆ ಇಳಿದಿದ್ದಾನೆ.ಯೋಜನೆ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande