
ಗುವಾಹಟಿ, 13 ಮಾರ್ಚ್ (ಹಿ.ಸ.):
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಅಸ್ಸಾಂಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು ₹36,279 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೊದಲ ದಿನ ಕೊಕ್ರಜಾರ್ ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ, ಬಿಟಿಸಿ ಪ್ರದೇಶಕ್ಕೆ ₹4,574 ಕೋಟಿ ಮೌಲ್ಯದ ಯೋಜನೆಗಳನ್ನು ಅರ್ಪಿಸಲಿದ್ದಾರೆ. ಮೂರು ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಇದಲ್ಲದೆ ಗುವಾಹಟಿಯಲ್ಲಿ ಹಲವು ರೈಲು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕಪಿಲಿ ಜಲವಿದ್ಯುತ್ ಯೋಜನೆ ಸಮರ್ಪಣೆ ಹಾಗೂ ಕಾಮಾಕ್ಯ ದೇವಾಲಯ ಸಂಪರ್ಕಿಸುವ ರೋಪ್‌ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಾರ್ಚ್ 14ರಂದು ಸುಮಾರು ₹22,864 ಕೋಟಿ ವೆಚ್ಚದ ಗುವಾಹಟಿ–ಸಿಲ್ಚಾರ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಶಂಕುಸ್ಥಾಪನೆ ಮಾಡುವುದರ ಜೊತೆಗೆ ಚಹಾ ತೋಟಗಾರರಿಗೆ ಭೂ ಪಟ್ಟಾ ವಿತರಣೆ ಕಾರ್ಯಕ್ರಮಕ್ಕೂ ಚಾಲನೆ ನೀಡಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa