
ಬೆಂಗಳೂರು, 13 ಮಾರ್ಚ್ (ಹಿ.ಸ.):
ಆ್ಯಂಕರ್:
ಸಂಘಟನೆ ಬಲಪಡಿಸುವುದು, ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಹಾಗೂ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಭಾರತೀಯ ಜನತಾ ಪಕ್ಷದ ಕೋರ್ ಸಮಿತಿ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು.
ಸಭೆಯಲ್ಲಿ ಪಕ್ಷದ ಸಂಘಟನಾ ಕಾರ್ಯಗಳು, ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಸಂಘಟಿತಗೊಳಿಸುವುದು, ಜನರೊಂದಿಗೆ ಸಂಪರ್ಕವನ್ನು ವೃದ್ಧಿಸುವುದು ಹಾಗೂ ಮುಂದಿನ ಚುನಾವಣೆಗೆ ಸಿದ್ಧತೆ ಮಾಡುವ ಕುರಿತು ನಾಯಕರು ಅಭಿಪ್ರಾಯ ಹಂಚಿಕೊಂಡರು.
ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಂಸದ ಗೋವಿಂದ್ ಕಾರಜೋಳ್, ಶಾಸಕರಾದ ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಸಿ.ಟಿ.ರವಿ, ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa