ಆದರ್ಶ ವಿದ್ಯಾಲಯಗಳ 6 ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ
ಕೊಪ್ಪಳ, 13 ಮಾರ್ಚ್ (ಹಿ.ಸ.): ಆ್ಯಂಕರ್ : 2026-27 ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ ಮಾರ್ಚ್ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್
ಆದರ್ಶ ವಿದ್ಯಾಲಯಗಳ 6 ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ


ಕೊಪ್ಪಳ, 13 ಮಾರ್ಚ್ (ಹಿ.ಸ.):

ಆ್ಯಂಕರ್ : 2026-27 ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ ಮಾರ್ಚ್ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ್ ಬಿ. ಇಟ್ನಾಳ್ ಅವರು ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ತಾಲ್ಲೂಕಿನ 6, ಗಂಗಾವತಿ ತಾಲ್ಲೂಕಿನ 4, ಕುಷ್ಟಗಿ ತಾಲ್ಲೂಕಿನ 8 ಹಾಗೂ ಯಲಬುರ್ಗಾ ತಾಲ್ಲೂಕಿನ 6 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 24 ಪರೀಕ್ಷೆಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande