ವಿಜಯಪುರದಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ: ಉಮೇಶ ಕಾರಜೋಳ
ವಿಜಯಪುರ, 13 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಯಾವುದೇ ಕೊರತೆ ಇಲ್ಲವಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಅಷ್ಟೊಂದು ಪ್ರಮಾಣದಲ್ಲಿ ಸಮಸ್ಯೆ ಇಲ್ಲ. ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಸಾಯಿ ಹೋಮ್ ನೀಡ್ಸ್ ಸಂಸ್ಥೆಯ ಮುಖ್ಯಸ
Karajol


ವಿಜಯಪುರ, 13 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಯಾವುದೇ ಕೊರತೆ ಇಲ್ಲವಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಅಷ್ಟೊಂದು ಪ್ರಮಾಣದಲ್ಲಿ ಸಮಸ್ಯೆ ಇಲ್ಲ. ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಸಾಯಿ ಹೋಮ್ ನೀಡ್ಸ್ ಸಂಸ್ಥೆಯ ಮುಖ್ಯಸ್ಥ ಹಾಗೂ ಬಿಜೆಪಿ ಯುವ ಮುಖಂಡ ಉಮೇಶ ಕಾರಜೋಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಮೆರಿಕಾ,ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದಂತಹ ಸಂದರ್ಭಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸೇರಿದಂತೆ ಇಂಧನಗಳ ಪೂರೈಕೆಯಲ್ಲಿ ಸ್ವಲ್ಪ ವ್ಯತ್ಯಯವಾಗುವುದು ಸಹಜ ಎಂದರು. ಆರಂಭದಲ್ಲಿ ಈ ಯುದ್ಧ ನಾಲ್ಕೈದು ದಿನಗಳಲ್ಲಿ ಅಂತ್ಯಗೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಯುದ್ಧ ಮುಂದುವರಿದಿರುವುದರಿಂದ ಕೆಲವೊಂದು ತಾತ್ಕಾಲಿಕ ಅಡಚಣೆಗಳು ಎದುರಾಗಿವೆ ಎಂದು ಹೇಳಿದರು.

ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕ ಕೊರತೆ ಉಂಟಾದಾಗ ವೈದ್ಯಕೀಯ ಉದ್ದೇಶಗಳಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಕೈಗಾರಿಕಾ ಬಳಕೆಗೆ ನಿರ್ಬಂಧ ಹೇರಲಾಗಿತ್ತು. ಅದೇ ರೀತಿ ಪ್ರಸ್ತುತ ಅಡುಗೆ ಅನಿಲ ಪೂರೈಕೆಯಲ್ಲಿ ಗೃಹ ಬಳಕೆಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.

ಅಂದರೆ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸಂಪೂರ್ಣವಾಗಿ ನಿಲ್ಲಿಸಲಾಗಿಲ್ಲ. ಆದರೆ ಅದರ ಪ್ರಮಾಣವನ್ನು ಸ್ವಲ್ಪ ಮಟ್ಟಿಗೆ ಕಡಿತಗೊಳಿಸಲಾಗಿದೆ. ಗೃಹ ಬಳಕೆಯ ಸಿಲಿಂಡರ್ಗಳು ಸಾಮಾನ್ಯವಾಗಿ ಒಂದು ತಿಂಗಳವರೆಗೆ ಬಳಕೆಯಾಗುವ ಕಾರಣ ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗೃಹ ಬಳಕೆಯ ಸಿಲಿಂಡರ್ಗಳ ಸಂಗ್ರಹವಿದೆ ಎಂದು ತಿಳಿಸಿದರು.

ಆದ್ದರಿಂದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನೈಸರ್ಗಿಕ ಇಂಧನಗಳನ್ನು ಮಿತವಾಗಿ ಬಳಸುವುದು ಅಗತ್ಯವಾಗಿದ್ದು, ಇದರಿಂದ ಸಮಸ್ಯೆ ಸುಲಭವಾಗಿ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಸಮರ್ಥ ಆಡಳಿತದ ಫಲವಾಗಿ ಜಿಲ್ಲೆಯಲ್ಲಿ ಗಂಭೀರವಾದ ಕೊರತೆ ಉಂಟಾಗಿಲ್ಲ ಎಂದು ಉಮೇಶ ಕಾರಜೋಳ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande