ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪಂ. ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಯೋಜನಾ ಸಭೆ
ವಿಜಯಪುರ, 13 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ‘ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ’ದ ಅಂಗವಾಗಿ ಜಿಲ್ಲಾ ಮಟ್ಟದ ಯೋಜನಾ ಸಭೆ ಯಶಸ್ವಿಯಾಗಿ ನಡೆಯಿತು. ಸಭೆಗೆ ಹಿರಿಯ ಮುಖಂಡರಾದ ಎಸ್.ಕೆ. ಬೆಳ್ಳುಬ್ಬಿ ಅವರು ವರ್ಗ ಗೀತೆ ಹಾಡುವ ಮೂಲಕ ಚಾಲನೆ
Bjp meeting


ವಿಜಯಪುರ, 13 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ‘ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ’ದ ಅಂಗವಾಗಿ ಜಿಲ್ಲಾ ಮಟ್ಟದ ಯೋಜನಾ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಗೆ ಹಿರಿಯ ಮುಖಂಡರಾದ ಎಸ್.ಕೆ. ಬೆಳ್ಳುಬ್ಬಿ ಅವರು ವರ್ಗ ಗೀತೆ ಹಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಬಿಜೆಪಿ ಮುಖಂಡ ಚಂದ್ರಶೇಖರ ಕವಟಗಿ ಅವರು ಪಕ್ಷದ ಸೈದ್ಧಾಂತಿಕ ನೆಲೆಗಟ್ಟಿನ ಕುರಿತು ಕಾರ್ಯಕರ್ತರಿಗೆ ವಿವರಿಸಿದರು.

ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಹಿನ್ನೆಲೆ ಹಾಗೂ ಪಂಡಿತ್ ದೀನದಯಾಳ ಉಪಾಧ್ಯಾಯರು ಪ್ರತಿಪಾದಿಸಿದ ‘ಏಕಾತ್ಮ ಮಾನವ ದರ್ಶನ’ ಸಿದ್ಧಾಂತದ ಮಹತ್ವವನ್ನು ವಿವರಿಸಿ, ಪ್ರತಿಯೊಬ್ಬ ಕಾರ್ಯಕರ್ತನಲ್ಲೂ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಸಂಘಟನಾತ್ಮಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ದೊಡ್ಡ ಪ್ರಮಾಣದಲ್ಲಿ ತರಬೇತಿ ಶಿಬಿರಗಳನ್ನು ನಡೆಸುವ ಅಗತ್ಯತೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮುಂಬರುವ ದಿನಗಳಲ್ಲಿ ಮಂಡಲ ಮಟ್ಟದಲ್ಲಿ ನಡೆಯಲಿರುವ ಪ್ರಶಿಕ್ಷಣ ವರ್ಗಗಳ ರೂಪುರೇಷೆ, ಕಾರ್ಯಕ್ರಮಗಳ ವಿವರ ಹಾಗೂ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ವಿವರಿಸಲಾಯಿತು. ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಈ ಪ್ರಶಿಕ್ಷಣ ಮಹಾಭಿಯಾನ ಮಹತ್ವದ ಪಾತ್ರ ವಹಿಸಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಸಭೆಯಲ್ಲಿ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಜಿಲ್ಲೆಯ ಎಲ್ಲ ಮಂಡಲಗಳಲ್ಲಿ ಪ್ರಶಿಕ್ಷಣ ವರ್ಗಗಳನ್ನು ಆಯೋಜಿಸಲಾಗುವುದು ಹಾಗೂ ರಾಜ್ಯ ಮಟ್ಟದ ಭಾಷಣಕಾರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಮೇಶ ಭೂಸನೂರ, ಎಸ್.ಕೆ. ಬೆಳ್ಳುಬ್ಬಿ, ಉಮೇಶ ಕಾರಜೋಳ, ಚಂದ್ರಶೇಖರ ಕವಟಗಿ, ಸಂಜಯಪಾಟೀಲ ಕನಮಡಿ, ಅನೀಲ ಜಮಾದಾರ, ಮಳುಗೌಡ ಪಾಟೀಲ, ಈರಣ್ಣ ರಾವೂರ, ಸಾಬು ಮಾಶ್ಯಾಳ, ಚಿದಾನಂದ ಚಲವಾದಿ, ಸ್ವಪ್ನಾ ಕಣಮುಚನಾಳ, ರಾಜೇಶ ತಾವಸೆ ಸೇರಿದಂತೆ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಮಂಡಲ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande