ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಭೀತಿ; ಒಡಿಶಾ ಕಾಂಗ್ರೆಸ್ ಶಾಸಕರು ಬೆಂಗಳೂರು ರೆಸಾರ್ಟ್ಗೆ
ಬೆಂಗಳೂರು, 13 ಮಾರ್ಚ್ (ಹಿ.ಸ.): ಆ್ಯಂಕರ್: ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಡ್ಡ ಮತದಾನ ತಡೆಯುವ ಉದ್ದೇಶದಿಂದ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಕಾಂಗ್ರೆಸ್‌ನ ಒಂಬತ್ತು ಶಾಸಕರು ರಾಮನಗರ ಜಿಲ್ಲೆಯ ಬಿಡದಿಯ
Odisha MLAs


ಬೆಂಗಳೂರು, 13 ಮಾರ್ಚ್ (ಹಿ.ಸ.):

ಆ್ಯಂಕರ್:

ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಡ್ಡ ಮತದಾನ ತಡೆಯುವ ಉದ್ದೇಶದಿಂದ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಕಾಂಗ್ರೆಸ್‌ನ ಒಂಬತ್ತು ಶಾಸಕರು ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ಲಾ ರೆಸಾರ್ಟ್ ನಲ್ಲಿ ತಂಗಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭಕ್ತ ಚರಣ್ ದಾಸ್ ಅವರ ನೇತೃತ್ವದಲ್ಲಿ ಪಕ್ಷದ 14 ಶಾಸಕರಲ್ಲಿ ಒಂಬತ್ತು ಮಂದಿ ಶಾಸಕರು ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಉಳಿದ ಶಾಸಕರು ಕೂಡ ಇಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆ ದಿನದಂದು ಶಾಸಕರು ಮತ್ತೆ ಭುವನೇಶ್ವರ ಗೆ ಮರಳುವ ಸಾಧ್ಯತೆ ಇದೆ.

ಈ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ದಿಲೀಪ್ ರೇ ಕಣಕ್ಕಿಳಿದಿದ್ದಾರೆ. ಇವರನ್ನು ಗೆಲ್ಲಿಸಲು ಬಿಜೆಪಿ ಅಡ್ಡ ಮತದಾನ ನಡೆಸುವ ಸಾಧ್ಯತೆ ಇದೆ ಎಂಬ ಆತಂಕ ಕಾಂಗ್ರೆಸ್‌ಗೆ ಉಂಟಾಗಿದೆ. ಈ ಕಾರಣದಿಂದಲೇ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಇದೀಗ ಕಾಂಗ್ರೆಸ್ ಪಕ್ಷವು ಬಿಜೆಡಿ ಅಭ್ಯರ್ಥಿ ಡಾ. ದತ್ತೇಶ್ವರ ಹೋತಾ ಅವರಿಗೆ ಬೆಂಬಲ ಘೋಷಿಸಿದೆ. ಸಂಖ್ಯಾಬಲದ ದೃಷ್ಟಿಯಿಂದ ಬಿಜು ಜನತಾ ದಳ ಮತ್ತು ಕಾಂಗ್ರೆಸ್ ಎರಡನೇ ಸ್ಥಾನ ಗೆಲ್ಲುವಷ್ಟು ಮತಗಳನ್ನು ಹೊಂದಿದ್ದರೂ, ದಿಲೀಪ್ ರೇ ಕಣದಲ್ಲಿರುವುದು ಕಾಂಗ್ರೆಸ್ ನಾಯಕರಲ್ಲಿ ಆತಂಕ ಹುಟ್ಟಿಸಿದೆ.

2022 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಡಿ ಶಾಸಕರಲ್ಲಿ ೧೨ ಶಾಸಕರು ಅಡ್ಡ ಮತದಾನ ಮಾಡಿದ್ದ ಹಿನ್ನೆಲೆ ಈ ಬಾರಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ರೆಸಾರ್ಟ್‌ಗೆ ಆಗಮಿಸಿದ ಶಾಸಕರನ್ನು ರಾಜ್ಯ ಕಾಂಗ್ರೆಸ್‌ನ ಸ್ಥಳೀಯ ಮುಖಂಡರು ಸ್ವಾಗತಿಸಿದರು.

ಶಾಸಕರು ತಂಗಿರುವ ಹಿನ್ನೆಲೆ ವಂಡರ್ಲಾ ರೆಸಾರ್ಟ್ ಸುತ್ತಮುತ್ತ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande