
ಹಾವೇರಿ, 13 ಮಾರ್ಚ್ (ಹಿ.ಸ.):
ಆ್ಯಂಕರ್:
ಹಾವೇರಿ ಜಿಲ್ಲೆಯ ಹಾನಗಲ್ ನಗರದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನಿರ್ಮಾಣ ಕಾರ್ಯಕ್ಕೆ ನಾಳೆ ಭೂಮಿಪೂಜೆ ನೆರವೇರಿಸಲಾಗುತ್ತದೆ.
ಸುಮಾರು ₹5.15 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ವಿದ್ಯಾರ್ಥಿ ನಿಲಯದ ಕಾಮಗಾರಿಗೆ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ವಸತಿ ಸೌಲಭ್ಯ ಒದಗಿಸಿ ಅವರ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ.
ಈ ವಿದ್ಯಾರ್ಥಿ ನಿಲಯ ನಿರ್ಮಾಣದಿಂದ ದೂರದ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಸುಲಭವಾಗುವ ಜೊತೆಗೆ ಅವರ ಶಿಕ್ಷಣ ಮುಂದುವರಿಸಲು ಅನುಕೂಲವಾಗಲಿದೆ ಎಂದು ಮಾನೆ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa