

ಬಳ್ಳಾರಿ, 13 ಮಾರ್ಚ್ (ಹಿ.ಸ.):
ಆ್ಯಂಕರ್: ಹಿರಿಯ ರಂಗ ಕಲಾವಿದರು, ವಿವಿಧ ಸಂಘ ಸಂಸ್ಥೆಗಳ ಮುಖಂಡರೂ ಆಗಿದ್ದ ರಮೇಶಗೌಡ ಪಾಟೀಲ್ (79) ಅವರು ಶುಕ್ರವಾರ ನಸುಕಿನಲ್ಲಿ ನಿಧನರಾಗಿದ್ದು, ವೀರೈಶವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಸಂಜೆ ನೆರವೇರಿತು.
ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು, ಸೊಸೆಯಂದಿರರು - ಅಳಿಯ, ಮೊಮ್ಮಕ್ಕಳನ್ನು, ಅಪಾರ ಸಂಖ್ಯೆಯ ಕಲಾಭಿಮಾನಿಗಳನ್ನು, ಆಪ್ತರು - ಬಂಧುವರ್ಗವನ್ನು ಅಗಲಿದ್ದಾರೆ.
ಹಂಪೆ ಉತ್ಸವ ಸೇರಿ ವಿವಿಧ ವೇದಿಕೆಗಳಲ್ಲಿ ಕಲೆ ಪ್ರದರ್ಶನ ಮಾಡಿದ್ದರು. ಕರ್ನಾಟಕ ನಾಟಕ ಅಕಾಡೆಮಿ,
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಶಸ್ತಿ ಸೇರಿ ವಿವಿಧ ಪ್ರಶಸ್ತಿ - ಪುರಸ್ಕಾರಗಳನ್ನು ಪಡೆದಿದ್ದರು.
ಇವರು ರಾಘವ ಮೆಮೋರಿಯಲ್ ಅಸೋಸಿಯೇಷನ್ನ ಕಾರ್ಯದರ್ಶಿಯಾಗಿ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರಾಗಿ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ, 2023 ರಲ್ಲಿ ನಡೆದ ಬಳ್ಳಾರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ವಿವಿಧ ಸಂಘ - ಸಂಸ್ಥೆಗಳ ಸದಸ್ಯರಾಗಿ - ಸಂಘಕರಾಗಿ ಸೇವೆ ಸಲ್ಲಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್