ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಆರಂಭ
ಕೊಪ್ಪಳ , 13 ಮಾರ್ಚ್ (ಹಿ.ಸ.): ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಜಿಲ್ಲಾ ಪಂಚಾಯತ್ ಮಟ
ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಆರಂಭ


ಕೊಪ್ಪಳ , 13 ಮಾರ್ಚ್ (ಹಿ.ಸ.):

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಜಿಲ್ಲಾ ಪಂಚಾಯತ್ ಮಟ್ಟದಲ್ಲಿ “ಕುಡಿಯುವ ನೀರಿನ ಸಹಾಯವಾಣಿ” ಆರಂಭಿಸಲಾಗಿದೆ.

ಜಿಲ್ಲೆಯಾದ್ಯಂತ ಇರುವ 7 ತಾಲೂಕುಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ದೂರುಗಳನ್ನು ಸ್ವೀಕರಿಸಿ ತಕ್ಷಣ ಪರಿಹಾರ ಕೈಗೊಳ್ಳುವ ಉದ್ದೇಶದಿಂದ ಈಗಾಗಲೇ ಎಲ್ಲಾ ತಾಲೂಕು ಪಂಚಾಯತ್ ಮಟ್ಟದಲ್ಲಿ ಕುಡಿಯುವ ನೀರಿನ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಇದರೊಂದಿಗೆ ಜಿಲ್ಲಾ ಪಂಚಾಯತ್ ಮಟ್ಟದಲ್ಲಿಯೂ ಸಹ ಸಹಾಯವಾಣಿ ಆರಂಭಿಸಲಾಗಿದ್ದು, ಸಾರ್ವಜನಿಕರು ತಮ್ಮ ಪ್ರದೇಶದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗಳ ಕುರಿತು 08539-221207 ಸಂಖ್ಯೆಗೆ ಸಂಪರ್ಕಿಸಿ ದೂರು ನೀಡಬಹುದು.

ಮುಂದಿನ ಮೂರು ತಿಂಗಳ ಅವಧಿಯಲ್ಲಿ ಜಿಲ್ಲೆಯ ಸುಮಾರು 133 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಅಂತಹ ಪರಿಸ್ಥಿತಿಯಲ್ಲಿ ಖಾಸಗಿ ಬೋರ್ವೆಲ್ಗಳು ಹಾಗೂ ಖಾಸಗಿ ಟ್ಯಾಂಕರ್ಗಳ ಮೂಲಕ ನಿಯಮಾನುಸಾರವಾಗಿ ನೀರು ಸರಬರಾಜು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದಲ್ಲದೆ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಇರುವ ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ನಿಯಮಾನುಸಾರ ಪರೀಕ್ಷೆಗೊಳಪಡಿಸಿ, ಶುದ್ಧತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಒಎಚ್ಟಿ, ಸಂಪು, ಮಿನಿ ವಾಟರ್ ಟ್ಯಾಂಕ್ ಹಾಗೂ ಜಿಎಲ್ಎಸ್ಆರ್ ಹಾಗೂ ಇತರೆ ನೀರು ಸಂಗ್ರಾಹಕಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ, ಶುದ್ಧೀಕರಣಕ್ಕೆ ಅಗತ್ಯ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಮೂಲಕ ಸಾರ್ವಜನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ಎಲ್ಲಿಯಾದರೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ದೂರು ನೀಡುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande