ತುರ್ತು ವಾಹನಗಳಿಗೆ ದಾರಿ ನೀಡಿ – ಸಾರ್ವಜನಿಕರಿಗೆ ಪೊಲೀಸರ ಮನವಿ
ಬಾಗಲಕೋಟೆ, 14 ಮಾರ್ಚ್ (ಹಿ.ಸ.) ಆ್ಯಂಕರ್ : ಆಂಬುಲೆನ್ಸ್, ಪೊಲೀಸ್ ಹಾಗೂ ಅಗ್ನಿಶಾಮಕ ವಾಹನಗಳು ತುರ್ತು ಪರಿಸ್ಥಿತಿಗಳಲ್ಲಿ ಜೀವ ರಕ್ಷಣೆಗಾಗಿ ವೇಗವಾಗಿ ಸಂಚರಿಸುತ್ತಿರುತ್ತವೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ತಮ್ಮ ವಾಹನಗಳನ್ನು ಪಕ್ಕಕ್ಕೆ ಸರಿಸಿ ತಕ್ಷಣವೇ ದಾರಿ ಬಿಡಬೇಕು ಎಂದು ಬಾಗಲಕೋಟೆ ಪೊಲೀಸ
Ambulance


ಬಾಗಲಕೋಟೆ, 14 ಮಾರ್ಚ್ (ಹಿ.ಸ.)

ಆ್ಯಂಕರ್ : ಆಂಬುಲೆನ್ಸ್, ಪೊಲೀಸ್ ಹಾಗೂ ಅಗ್ನಿಶಾಮಕ ವಾಹನಗಳು ತುರ್ತು ಪರಿಸ್ಥಿತಿಗಳಲ್ಲಿ ಜೀವ ರಕ್ಷಣೆಗಾಗಿ ವೇಗವಾಗಿ ಸಂಚರಿಸುತ್ತಿರುತ್ತವೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ತಮ್ಮ ವಾಹನಗಳನ್ನು ಪಕ್ಕಕ್ಕೆ ಸರಿಸಿ ತಕ್ಷಣವೇ ದಾರಿ ಬಿಡಬೇಕು ಎಂದು ಬಾಗಲಕೋಟೆ ಪೊಲೀಸರು ಮನವಿ ಮಾಡಿದ್ದಾರೆ.

ಆಂಬುಲೆನ್ಸ್ ಸೈರನ್ ಕೇಳಿದ ಕೂಡಲೇ ವಾಹನ ಸವಾರರು ತಮ್ಮ ವಾಹನಗಳನ್ನು ರಸ್ತೆಯ ಬದಿಗೆ ಸರಿಸಿ ತುರ್ತು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವುದು ಅಪಾಯಕಾರಿಯಾಗಿದ್ದು, ಇದು ಜೀವ ರಕ್ಷಣೆಯ ಕಾರ್ಯಕ್ಕೆ ತೊಂದರೆಯಾಗಬಹುದು ಎಂದು ತಿಳಿಸಿದ್ದಾರೆ.

ರಸ್ತೆಗಳಲ್ಲಿ ಶಿಸ್ತಿನಿಂದ ವಾಹನ ಚಲಾಯಿಸುವುದರ ಜೊತೆಗೆ ತುರ್ತು ವಾಹನಗಳಿಗೆ ಆದ್ಯತೆ ನೀಡಬೇಕು. ಸಾರ್ವಜನಿಕರ ಒಂದು ಕ್ಷಣದ ಸಹಕಾರದಿಂದ ಅಮೂಲ್ಯವಾದ ಜೀವವನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲ ವಾಹನ ಸವಾರರೂ ಸಂಚಾರ ನಿಯಮಗಳನ್ನು ಪಾಲಿಸಿ ತುರ್ತು ವಾಹನಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande