ರೈತ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು, 14 ಮಾರ್ಚ್ (ಹಿ.ಸ.) ಆ್ಯಂಕರ್:- ರಾಯಚೂರು ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನಡೆಯಲಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್
ಫೋಟೋ


ರಾಯಚೂರು, 14 ಮಾರ್ಚ್ (ಹಿ.ಸ.)

ಆ್ಯಂಕರ್:- ರಾಯಚೂರು ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನಡೆಯಲಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಟ 65 ವರ್ಷ ಹಾಗೂ ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷದ ಅಭ್ಯರ್ಥಿಗಳು ಕನ್ನಡ ವಿಷಯದೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಯ ತಂದೆ / ತಾಯಿ / ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ಮೇಲೆ ತಿಳಿಸಿದ ವಿವರಗಳೊಂದಿಗೆ ಇತರೆ ದಾಖಲಾತಿಗಳಾದ ಇತ್ಯಾದಿಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುರಾಜ್ಯವಲಯ, ರಾಯಚೂರುಕಛೇರಿ ಅಥವಾ ಇಲಾಖೆಯ ವೆಬ್ ಸೈಟ್ ಮೂಲಕ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ರಾಜ್ಯ ವಲಯ, ರಾಯಚೂರು ಅಥವಾ ದೂರವಾಣಿ ಸಂಖ್ಯೆ: 9844621424ಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande