
ಸಿಲ್ಚಾರ್, 14 ಮಾರ್ಚ್ (ಹಿ.ಸ.):
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಸಾಂ ಭೇಟಿಯ ಎರಡನೇ ದಿನವಾದ ಶನಿವಾರ ಬರಾಕ್ ಕಣಿವೆಗೆ ಭಾರೀ ಅಭಿವೃದ್ಧಿ ಪ್ಯಾಕೇಜ್ ಘೋಷಣೆಯಾಗಲಿದ್ದು, ಸುಮಾರು ₹23,550 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನಡೆಯಲಿದೆ.
ಪ್ರಧಾನಿ ಮೋದಿ ಅವರು ಇಂದು ಸಿಲ್ಚಾರ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಮೂಲಸೌಕರ್ಯ, ರಸ್ತೆ, ರೈಲು ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ನಿರೀಕ್ಷೆಯಿದೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಶುಕ್ರವಾರ ಎರಡು ದಿನಗಳ ಅಸ್ಸಾಂ ಪ್ರವಾಸದ ಭಾಗವಾಗಿ ಗುವಾಹಟಿ ನಗರಕ್ಕೆ ಆಗಮಿಸಿದ್ದರು. ಪ್ರವಾಸದ ವೇಳೆ ಕೊಕ್ರಜಾರ್ ನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಮಳೆಯಿಂದಾಗಿ ರದ್ದಾಗಿದ್ದು, ಪ್ರಧಾನಿಯವರು ಗುವಾಹಟಿಯಿಂದಲೇ ವರ್ಚುವಲ್ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರೆ, ಸಂಜೆ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಚಹಾ ತೋಟದ ಕಾರ್ಮಿಕರ ಸಮುದಾಯಕ್ಕೆ ಭೂ ಗುತ್ತಿಗೆ ಹಕ್ಕುಪತ್ರಗಳನ್ನು ವಿತರಿಸಿದರು.
ಬರಾಕ್ ಕಣಿವೆಯಲ್ಲಿ ನಡೆಯಲಿರುವ ಇಂದಿನ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa