ಬಾಗಲಕೋಟೆಯಲ್ಲಿ ಬೃಹತ್ ಉದ್ಯೋಗ ಮೇಳ: ಪೋಸ್ಟರ್ ಬಿಡುಗಡೆ
ಬಾಗಲಕೋಟೆ, 14 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಾರ್ಚ್ 17, 2026ರಂದು ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದ ಪೋಸ್ಟರ್ ಜಿಲ್ಲಾಡಳಿತ ಭವನದಲ್ಲಿ ಬಿಡುಗಡೆ ಮಾ
ಬಾಗಲಕೋಟೆಯಲ್ಲಿ ಬೃಹತ್ ಉದ್ಯೋಗ ಮೇಳ: ಪೋಸ್ಟರ್ ಬಿಡುಗಡೆ


ಬಾಗಲಕೋಟೆ, 14 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಾರ್ಚ್ 17, 2026ರಂದು ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದ ಪೋಸ್ಟರ್ ಜಿಲ್ಲಾಡಳಿತ ಭವನದಲ್ಲಿ ಬಿಡುಗಡೆ ಮಾಡಿದ ಜಿಲ್ಲಾಡಳಿತ, ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ಉದ್ಯೋಗ ಮೇಳದ ಮೂಲಕ ಜಿಲ್ಲೆಯ ಯುವಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಯುವ ಸಮೃದ್ಧಿ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿರುವ ಈ ಮೇಳದಲ್ಲಿ ವಿವಿಧ ಕ್ಷೇತ್ರಗಳ ಕಂಪನಿಗಳು ಭಾಗವಹಿಸಿ ಸ್ಥಳದಲ್ಲೇ ಸಂದರ್ಶನ ನಡೆಸಲಿವೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಡಳಿತ, ಕೌಶಲ್ಯ ಅಭಿವೃದ್ಧಿ ಇಲಾಖೆ ಹಾಗೂ ಇತರ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಮೇಳ ಆಯೋಜಿಸಲಾಗುತ್ತಿದ್ದು, ವಿವಿಧ ಶಿಕ್ಷಣ ಅರ್ಹತೆಗಳಿಗೆ ಅನುಗುಣವಾಗಿ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande