ನವನಗರದಲ್ಲಿ ಬೃಹತ್ ವೇದಿಕೆ ಸಿದ್ಧತೆ: ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಇಂದು ಸಿಎಂ ಶಂಕುಸ್ಥಾಪನೆ
ಬಾಗಲಕೋಟೆ, 14 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜನತೆಯ ಬಹುಕಾಲದ ನಿರೀಕ್ಷೆಯಾಗಿದ್ದ ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನವನಗರದ ಯುನಿಟ್–1ರ ಸೆಕ್ಟರ್ ನಂ.1ರಲ್ಲಿ ಈ ಕಾರ್ಯಕ್ರಮಕ್ಕಾಗಿ ವಿಶಾಲವಾದ ವ
ಸಿಎಮ್ ಕಾರ್ಯಕ್ರಮ


ಬಾಗಲಕೋಟೆ, 14 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ

ಜಿಲ್ಲೆಯ ಜನತೆಯ ಬಹುಕಾಲದ ನಿರೀಕ್ಷೆಯಾಗಿದ್ದ ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನವನಗರದ ಯುನಿಟ್–1ರ ಸೆಕ್ಟರ್ ನಂ.1ರಲ್ಲಿ ಈ ಕಾರ್ಯಕ್ರಮಕ್ಕಾಗಿ ವಿಶಾಲವಾದ ವೇದಿಕೆ ಹಾಗೂ ಸಭಾಂಗಣವನ್ನು ನಿರ್ಮಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ.

ಕಾರ್ಯಕ್ರಮ ಸ್ಥಳದಲ್ಲಿ ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ, ಭದ್ರತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

ಜೊತೆಗೆ ಗಣ್ಯ ವ್ಯಕ್ತಿಗಳಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ. ಮುಳುಗಡೆ ರೈತರಿಗೆ ಪರಿಹಾರದ ಚೆಕ್ ವಿತರಣೆ ಸೇರಿದಂತೆ ವಿವಿಧ ಯೋಜನೆಗಳಿಗೆ ಸಿಎಂ ಉದ್ಘಾಟನೆ ಮಾಡಲಿದ್ದಾರೆ.

ವಿವಿಧ ಯೋಜನೆಗಳ

ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾಡಳಿತದಿಂದ 215 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಬಾಗಲಕೋಟೆ ಸೇರಿದಂತೆ ಬೆಳಗಾವಿ ವಿಜಯಪುರ ಜಿಲ್ಲೆಯ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande