ಬೀದರ್ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲನೆ
ಬೀದರ್, 14 ಮಾರ್ಚ್ (ಹಿ.ಸ.): ಆ್ಯಂಕರ್: ಬೀದರ ನಗರದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ₹48 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ಕಾಮಗಾರಿಯನ್ನು ಸಚಿವ ಈಶ್ವರ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಕಾಮಗಾರಿಯ ಪ್ರಗತಿಯನ್ನು ಸಂಬಂಧಿ
Inspection


ಬೀದರ್, 14 ಮಾರ್ಚ್ (ಹಿ.ಸ.):

ಆ್ಯಂಕರ್:

ಬೀದರ ನಗರದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ₹48 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ಕಾಮಗಾರಿಯನ್ನು ಸಚಿವ ಈಶ್ವರ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಕಾಮಗಾರಿಯ ಪ್ರಗತಿಯನ್ನು ಸಂಬಂಧಿತ ಅಧಿಕಾರಿಗಳೊಂದಿಗೆ ಪರಿಶೀಲಿಸಿ, ಕಟ್ಟಡವನ್ನು ಉತ್ತಮ ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಒಂದೇ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಸುಲಭವಾಗಿ ಹಾಗೂ ವೇಗವಾಗಿ ಸೇವೆಗಳು ದೊರೆಯುವಂತೆ ಈ ಜಿಲ್ಲಾ ಸಂಕೀರ್ಣ ನಿರ್ಮಾಣವಾಗುತ್ತಿದೆ. ಇದು ಬೀದರ ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಸಹಕಾರಿಯಾಗಲಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande