ಉತ್ತರ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಕೇಂದ್ರದ ಮೇಲೆ ಒತ್ತಡ ಹೇರಲು ಆಗ್ರಹ
ವಿಜಯಪುರ, 14 ಮಾರ್ಚ್ (ಹಿ.ಸ.) ಆ್ಯಂಕರ್ : ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದ್ದು, ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಬೃಹತ್
Airport


ವಿಜಯಪುರ, 14 ಮಾರ್ಚ್ (ಹಿ.ಸ.)

ಆ್ಯಂಕರ್ : ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದ್ದು, ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಬೃಹತ್ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದರು.

ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ ಕೇಂದ್ರ ಸರ್ಕಾರವು ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಮಾತ್ರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸಿದ್ದು, ಕರ್ನಾಟಕದ ಬೇಡಿಕೆಯನ್ನು ಪರಿಗಣಿಸಿಲ್ಲ ಎಂದು ಪ್ರಕಟಣೆಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಕೇಂದ್ರ ಸಚಿವರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande