ಶಿಕ್ಷಣ ಪ್ರದರ್ಶನ, ಕೆರಿಯರ್ ಮೇಳ ಆಯೋಜನೆ
ರಾಯಚೂರು, 14 ಮಾರ್ಚ್ (ಹಿ.ಸ.) ಆ್ಯಂಕರ್:ಸರ್ಕಾರದ ನಿರ್ದೇಶನದಂತೆ ಇಲ್ಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಯರಮರಸ್ನಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸಲಾಗಿದ್ದು, ಇದರ ಅಂಗವಾಗಿ ಜಿಲ್ಲೆಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ
ಫೋಟೋ


ರಾಯಚೂರು, 14 ಮಾರ್ಚ್ (ಹಿ.ಸ.)

ಆ್ಯಂಕರ್:ಸರ್ಕಾರದ ನಿರ್ದೇಶನದಂತೆ ಇಲ್ಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಯರಮರಸ್ನಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸಲಾಗಿದ್ದು, ಇದರ ಅಂಗವಾಗಿ ಜಿಲ್ಲೆಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ವೃತ್ತಿ ಪ್ರಪಂಚದ ಅರಿವು ಮೂಡಿಸಲು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳವನ್ನು

ಮಾರ್ಚ್ 17ರ ಬೆಳಿಗ್ಗೆ 9ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ 10ನೇ ತರಗತಿ, ಪಿಯುಸಿ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಶಿಕ್ಷಣಾವಕಾಶಗಳು, ತಾಂತ್ರಿಕ ಶಿಕ್ಷಣ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್, ಮೆಡಿಕಲ್, ಕೌಶಲ್ಯ ತರಬೇತಿ, ಕೃಷಿ, ಕಂಪ್ಯೂಟರ್ ಕೋರ್ಸ್ಗಳು, ವಿದ್ಯಾರ್ಥಿವೇತನ, ತರಬೇತಿ ಕೇಂದ್ರಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ಆಸಕ್ತರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಯಟ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande