ಕೊಪ್ಪಳ : ಕ್ರೀಡಾ ಇಲಾಖೆಯಿಂದ ಬೇಸಿಗೆ ತರಬೇತಿ ಶಿಬಿರ: ನೋಂದಣಿ
ಕೊಪ್ಪಳ, 14 ಮಾರ್ಚ್ (ಹಿ.ಸ.): ಆ್ಯಂಕರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳಿಗೆ ಬೇಸಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಜಿಲ್ಲೆಯ ಎಲ್ಲಾ ವಯೋಮಾನದ ಮಕ್ಕಳು ಮತ್ತು ಪುರುಷ, ಮಹಿಳೆಯರಿಗೆ ಆರೋಗ್ಯದ ಹಿತದೃಷ್ಟ
ಕೊಪ್ಪಳ : ಕ್ರೀಡಾ ಇಲಾಖೆಯಿಂದ ಬೇಸಿಗೆ ತರಬೇತಿ ಶಿಬಿರ: ನೋಂದಣಿ


ಕೊಪ್ಪಳ, 14 ಮಾರ್ಚ್ (ಹಿ.ಸ.):

ಆ್ಯಂಕರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳಿಗೆ ಬೇಸಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಜಿಲ್ಲೆಯ ಎಲ್ಲಾ ವಯೋಮಾನದ ಮಕ್ಕಳು ಮತ್ತು ಪುರುಷ, ಮಹಿಳೆಯರಿಗೆ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮಕ್ಕಳಲ್ಲಿ ಕ್ರೀಡೆಗಳ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಆಸಕ್ತಿ ಮೂಡಿಸುವ ದೃಷ್ಟಿಯಿಂದ ನಿಗದಿತ ಶುಲ್ಕದೊಂದಿಗೆ ಈಜು, ಅಥ್ಲೆಟಿಕ್ಸ್, ವಾಲಿಬಾಲ್, ಜಿಮ್, ಶೆಟಲ್ ಬ್ಯಾಡ್ಮಿಂಟನ್, ಚೆಸ್, ಟೇಬಲ್ ಟೆನ್ನಿಸ್, ಕರಾಟೆ ಕ್ರೀಡೆಗಳ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರು ಇಲಾಖೆಯ ಕಾರ್ಯಾಲಯಕ್ಕೆ ಭೇಟಿ ಹೆಸರು ನೋಂದಾಯಿಸಿಕೊಳ್ಳಬಹುದು.

ಆಸಕ್ತರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಕಛೇರಿಗೆ ಭೇಟಿ ನೀಡಬಹುದು ಹಾಗೂ ಕಛೇರಿಯ ದೂರವಾಣಿ ಸಂಖ್ಯೆ: 08539-230121 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande