ವಿದ್ಯಾರ್ಥಿಗಳಿಗೆ ರಸ್ತೆ ಹಾಗೂ ಸೈಬರ್ ಸುರಕ್ಷತೆ ಕುರಿತು ಅಕ್ಕಪಡೆ ತಂಡದಿಂದ ಜಾಗೃತಿ
ಬಾಗಲಕೋಟೆ, 14 ಮಾರ್ಚ್ (ಹಿ.ಸ.) ಆ್ಯಂಕರ್ : ಅಕ್ಕಪಡೆ ತಂಡವು ಬಾಗಲಕೋಟೆ ನವನಗರದ ಕೋರ್ ಸೈನ್ಸ್ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ವಿವಿಧ ಸಾಮಾಜಿಕ ಹಾಗೂ ಕಾನೂನು ವಿಷಯಗಳ ಕುರಿತು ಜಾಗೃತಿ ಮೂಡಿಸಿತು. ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ, ಸೈಬರ್ ಸುರಕ್ಷತೆ, ಮಾದಕ ದ್ರವ್ಯಗಳ ಸೇವನೆಯಿಂದಾಗ
ಅಕ್ಕಾಪಡೆ


ಬಾಗಲಕೋಟೆ, 14 ಮಾರ್ಚ್ (ಹಿ.ಸ.)

ಆ್ಯಂಕರ್ : ಅಕ್ಕಪಡೆ ತಂಡವು ಬಾಗಲಕೋಟೆ ನವನಗರದ ಕೋರ್ ಸೈನ್ಸ್ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ವಿವಿಧ ಸಾಮಾಜಿಕ ಹಾಗೂ ಕಾನೂನು ವಿಷಯಗಳ ಕುರಿತು ಜಾಗೃತಿ ಮೂಡಿಸಿತು.

ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ, ಸೈಬರ್ ಸುರಕ್ಷತೆ, ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು, ಬಾಲ್ಯ ವಿವಾಹದ ಅಪಾಯಗಳು, ಸಂಚಾರ ನಿಯಮಗಳ ಪಾಲನೆ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಸೈಬರ್ ಅಪರಾಧಗಳಿಂದ ಹೇಗೆ ದೂರ ಇರಬೇಕು, ರಸ್ತೆಗಳಲ್ಲಿ ಸುರಕ್ಷಿತವಾಗಿ ವಾಹನ ಸಂಚಾರ ನಡೆಸುವ ಅಗತ್ಯತೆ ಮತ್ತು ಮಾದಕ ದ್ರವ್ಯಗಳ ಬಳಕೆಯಿಂದ ಉಂಟಾಗುವ ಹಾನಿಗಳ ಕುರಿತು ವಿವರವಾಗಿ ತಿಳಿಸಲಾಯಿತು.

ಜೊತೆಗೆ ಬಾಲ್ಯ ವಿವಾಹ ತಡೆಯುವ ಮಹತ್ವ ಮತ್ತು ಮಕ್ಕಳ ರಕ್ಷಣೆಗೆ ಜಾರಿಗೆ ತಂದಿರುವ ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಈ ವೇಳೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ವಿವಿಧ ಪ್ರಶ್ನೆಗಳು ಕೇಳಿ ಮಾಹಿತಿ ಪಡೆದುಕೊಂಡರು. ಸಮಾಜದಲ್ಲಿ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande