ರಾಯಚೂರು ಜಿಲ್ಲೆಯಲ್ಲಿ ಅಡುಗೆ ಅನಿಲದ ಕೊರತೆ ಇಲ್ಲ: ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು, 14 ಮಾರ್ಚ್ (ಹಿ.ಸ.) ಆ್ಯಂಕರ್:ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಗೊಡಬಾರದು. ಜಿಲ್ಲೆಯಲ್ಲಿ ಅಡುಗೆ ಅನಿ
ಫೋಟೋ


ರಾಯಚೂರು, 14 ಮಾರ್ಚ್ (ಹಿ.ಸ.)

ಆ್ಯಂಕರ್:ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಗೊಡಬಾರದು. ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.

ದೇಶಾದ್ಯಂತ ಎಲ್ಪಿಜಿ ಉತ್ಪಾದನೆ ಮತ್ತು ಬಾಟಲಿಂಗ್ ಎರಡೂ ಹೆಚ್ಚಿರುವುದರಿಂದ ದೇಶಿಯ ಎಲ್ಪಿಜಿಯ ಕೊರತೆ ಇರುವುದಿಲ್ಲ. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ಗಳು ಸಾಕಷ್ಟು ಪ್ರಮಾಣದಲ್ಲಿ ಸದ್ಯ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಯಾರು ಗಾಬರಿಗೊಳ್ಳಬಾರದೆಂದು ಹಾಗೂ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ತಿಳಿಯಪಡಿಸಿದೆ. ಹೆಚ್ಚಿನ ಗ್ರಾಹಕರು ಮುಂಚಿತವಾಗಿ ಬುಕ್ಕಿಂಗ್ ಮಾಡುತ್ತಿರುವುದರಿಂದ ಐವಿಆರ್ಎಸ್/ಮಿಸಡ್ ಕಾಲ್ ಮಾಡುವ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗಿ ಸದರಿ ಸಿಸ್ಟಮ್ ಗಳು ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಪರ್ಯಾಯವಾಗಿ ಎಲ್ಪಿಜಿ ತೈಲ ಕಂಪನಿಗಳು ಗ್ರಾಹಕರಿಗೆ 6 ಬುಕಿಂಗ್ ವಿಧಾನಗಳು ಲಭ್ಯವಿವೆ. ಪೋರ್ಟಲ್ಗಳು ಮತ್ತು ಪಾವತಿ ಆಪ್ಲಿಕೇಶನಗಳು ನಂತಹ ಇತ್ಯಾದಿ ಗ್ರಾಹಕರು. ತಮ್ಮ ಅನುಕೂಲಕ್ಕೆ ಅನುಗುಣವಾಗಿ ಈ ವ್ಯವಸ್ಥೆಯನ್ನು ಬಳಸಲು ಸೂಚಿಸಲಾಗಿದೆ.

ಬೇಡಿಕೆಯ ಭಾಗವನ್ನು ನಿರ್ವಹಿಸಲು, ಪತ್ರಿ ಗ್ರಾಹಕರಿಗೆ ಕೊನೆಯ ಮರುಪುರಣದ ದಿನಾಂಕದಿಂದ 25 ದಿನಗಳವರೆಗೆ ಇಂಟರ್-ಬುಕಿಂಗ್ ಅವಧಿಯನ್ನು ನಿಗಧಿಪಡಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರಗಳ ಕೊರತೆ ಇರುವುದಿಲ್ಲವಾದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಒಂದು ವೇಳೆ ಯಾವುದೇ ಸಮಸ್ಯೆ ಕಂಡುಬಂದಲ್ಲಿ ತಾಲ್ಲೂಕು ಮಟ್ಟದಲ್ಲಿ ಆಯಾ ತಾಲ್ಲೂಕಿನ ತಹಶಿಲ್ದಾರರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಕಚೇರಿಗೆ ಕಚೇರಿ ಸಮಯದಲ್ಲಿ ದೂರವಾಣಿ ಸಂಖ್ಯೆ: 08532-226383ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande