ಪ್ರಾಚೀನ ವಸ್ತುಗಳ ಸಂಗ್ರಹಾಲಯ ಮಹಡಿ ಉದ್ಘಾಟನೆ
ಬೆಂಗಳೂರು, 15 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪ್ರದೇಶದಲ್ಲಿರುವ ಬಿಲ್ಲವ ಅಸೋಸಿಯೇಷನ್ (ರಿ) ವತಿಯಿಂದ ಭಾನುವಾರ “ಶ್ರೀ ಸತ್ಯನಾರಾಯಣ ಪೂಜೆ ಸಮೇತ ಮಹಿಳಾ ದಿನಾಚರಣೆ–2026” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ
Dgr


ಬೆಂಗಳೂರು, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪ್ರದೇಶದಲ್ಲಿರುವ ಬಿಲ್ಲವ ಅಸೋಸಿಯೇಷನ್ (ರಿ) ವತಿಯಿಂದ ಭಾನುವಾರ “ಶ್ರೀ ಸತ್ಯನಾರಾಯಣ ಪೂಜೆ ಸಮೇತ ಮಹಿಳಾ ದಿನಾಚರಣೆ–2026” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಲ್ಲವ ಅಸೋಸಿಯೇಷನ್ ಬೆಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಲಾದ ‘ಪ್ರಾಚೀನ ವಸ್ತುಗಳ ಸಂಗ್ರಹಾಲಯ’ದ ಮಹಡಿಯನ್ನು ಸಚಿವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ನಮ್ಮ ಸಂಸ್ಕೃತಿ ಹಾಗೂ ಇತಿಹಾಸದ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಸಂಗ್ರಹಾಲಯಗಳ ಸ್ಥಾಪನೆ ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಬಿಲ್ಲವ ಸಮಾಜದ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾಜದ ಸಶಕ್ತೀಕರಣ ಮತ್ತು ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಈ ವೇಳೆ ಸಚಿವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande