
ಬಾಗಲಕೋಟೆ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ನೂತನ ಅಧ್ಯಕ್ಷರಾಗಿ ಬಸವೇಶ್ವರ ಬ್ಯಾಂಕ್ ಅಧ್ಯಕ್ಷರಾದ ಪ್ರಕಾಶ ತಪಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಪ್ರಕಾಶ ತಪಶೆಟ್ಟಿ ಅವರು ಸಮಾಜಸೇವೆ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಸವೇಶ್ವರ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೀಗ ಅವರನ್ನು ಬಿಟಿಡಿಎ ಅಧ್ಯಕ್ಷರಾಗಿ ನೇಮಕ ಮಾಡಿರುವುದರಿಂದ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಪಟ್ಟಣದ ಮೂಲಸೌಕರ್ಯ ಅಭಿವೃದ್ಧಿ, ಹೊಸ ಯೋಜನೆಗಳ ಜಾರಿಗೆ ಒತ್ತು ನೀಡುವ ಜೊತೆಗೆ ಬಾಗಲಕೋಟೆಯ ಸಮಗ್ರ ಅಭಿವೃದ್ಧಿಗೆ ಅವರು ಆದ್ಯತೆ ನೀಡುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ತಪಶೆಟ್ಟಿ ಅವರ ನೇಮಕಕ್ಕೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ
---------------
ಹಿಂದೂಸ್ತಾನ್ ಸಮಾಚಾರ್ / jyothi deshpande