
ವಿಜಯಪುರ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ಕೆಪಿಸಿಸಿ ಪ್ರಚಾರ ಸಮಿತಿ ಹಾಗೂ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ವಿಜಯ ಫಂಕ್ಷನ್ ಹಾಲ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸಚಿವರಾದ ಎಂ ಬಿ ಪಾಟೀಲ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ ಕುಮಾರ್ ಸೋರಕೆ, ಎಮ್ಎಲ್ಸಿ ಸಲೀಂ ಅಹೆಮ್ಮದ್, ಶಾಸಕರಾದ ವಿಠ್ಠಲ ಕಟಕದೊಂಡ್, ಮಾಜಿ ಶಾಸಕ ರಾಜು ಅಲಗೂರು, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದರು.
ಇದೇ ವೇಳೆ ಕೆಪಿಸಿಸಿ ಮುಖ್ಯ ಸಂಯೋಜಕರಾದ ಸುಧೀರ ಕುಮಾರ ಮುರೊಳ್ಳಿ, ಶರಣಪ್ಪ ಕೂಟಗಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮೀಜಾ ನದಾಫ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ನಾಯಕರು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಕಾರ್ಯಕರ್ತರಿಗೆ ಪಕ್ಷದ ಸಂಘಟನೆ ಬಲಪಡಿಸುವುದು, ಪ್ರಚಾರ ತಂತ್ರಗಳು ಹಾಗೂ ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸುವ ಕುರಿತು ಮಾರ್ಗದರ್ಶನ ನೀಡಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande