ಮಹಾಲಕ್ಷ್ಮೀ ದೇವಿ ಮಂದಿರ ಲೋಕಾರ್ಪಣೆ
ಬೆಳಗಾವಿ, 15 ಮಾರ್ಚ್ (ಹಿ.ಸ.): ಆ್ಯಂಕರ್: ಧರ್ಮೋ ರಕ್ಷತಿ ರಕ್ಷಿತಃ” ಎಂಬ ಸಂದೇಶದೊಂದಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಹಾಲಕ್ಷ್ಮೀ ದೇವಿ ಮಂದಿರದ ವಾಸ್ತುಶಾಂತಿ, ಕಳಸಾರೋಹಣ ಹಾಗೂ ಲೋಕ
Hebalakar


ಬೆಳಗಾವಿ, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಧರ್ಮೋ ರಕ್ಷತಿ ರಕ್ಷಿತಃ” ಎಂಬ ಸಂದೇಶದೊಂದಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಹಾಲಕ್ಷ್ಮೀ ದೇವಿ ಮಂದಿರದ ವಾಸ್ತುಶಾಂತಿ, ಕಳಸಾರೋಹಣ ಹಾಗೂ ಲೋಕಾರ್ಪಣೆಯ ಸಮಾರಂಭ ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮದ ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಧಾರ್ಮಿಕ ಕಾರ್ಯಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸುವ ಮೂಲಕ ಸುಂದರ ದೇವಾಲಯಗಳ ನಿರ್ಮಾಣಕ್ಕೆ ಚಾಲನೆ ನೀಡಿ ಲೋಕಾರ್ಪಣೆಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಸಂತರಾವ ಜಾಧವ, ದಶರಥ ಚೌಬಾರಿ, ಬಾಬು ಧರೆನ್ನವರ, ಗಣಪತಿ ಬಾಳುನ್ನವರ, ನಾಗೇಶ ದೇಸಾಯಿ, ಶಂಕರಗೌಡ ಪಾಟೀಲ, ಮಹಾದೇವಿ ರಾಮಚನ್ನವರ, ಕಲ್ಲಪ್ಪ ರಾಮಚನ್ನವರ, ನಿಲೇಶ ಚಂದಗಡ್ಕರ್, ವಿಠ್ಠಲ ಕುರುಬರ, ರವಿ ಬಾಳುನ್ನವರ, ಮಾರುತಿ ಸುಳಗೇಕರ ಸೇರಿದಂತೆ ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande